HomeVijayanagarಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಆಡಳಿತ ಶಾಶ್ವತ: ಕುರಿ ಶಿವಮೂರ್ತಿ

ಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಆಡಳಿತ ಶಾಶ್ವತ: ಕುರಿ ಶಿವಮೂರ್ತಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯದ ಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಆಡಳಿತಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ತನ್ನದೇ ಆದ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಿಕೊಳ್ಳಲಿದೆ ಎಂದು ವಿಜಯನಗರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು.
ಕೊಟ್ಟೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆದರೂ ಸಂತೋಷವೇ, ಹಾಗೆಯೇ ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿ ಆದರೂ ಪಕ್ಷದ ಆಡಳಿತ ಮತ್ತಷ್ಟು ಬಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಎಂಟನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ರಾಜ್ಯದ ಜನತೆಗೆ ತಮ್ಮದೇ ಆದ ಪರಿಕಲ್ಪನೆಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಅವರು ಕೈಗೊಂಡಿರುವ ಯೋಜನೆಗಳು ಜನಮಾನಸದಲ್ಲಿ ಅಜರಾಮರವಾಗಿರಲಿವೆ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಪಕ್ಷದ ನಾಯಕತ್ವದಲ್ಲಿ ಸಮನ್ವಯವಿದ್ದು, ಸರ್ಕಾರ ಸ್ಥಿರವಾಗಿ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಸೌಲಭ್ಯಗಳು ಹಾಗೂ ಖಾತರಿ ಯೋಜನೆಗಳು ರಾಜ್ಯದ ಎಲ್ಲಾ ವರ್ಗದ ಜನರಿಗೆ ಪ್ರಾಮಾಣಿಕವಾಗಿ ತಲುಪುತ್ತಿವೆ ಎಂದು ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
“ಮುಖ್ಯಮಂತ್ರಿ ಯಾರೇ ಆದರೂ ಕಾಂಗ್ರೆಸ್ ಆಡಳಿತ ಮಾತ್ರ ಐದು ವರ್ಷ 
ಪೂರ್ಣಗೊಳಿಸಿ ಶಾಶ್ವತ ಅಸ್ತಿತ್ವ ಪಡೆಯಲಿದೆ.”
ಕುರಿ ಶಿವಮೂರ್ತಿ
ವಿಜಯನಗರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!