ಮೈಸೂರಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ: ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಅಖಾಡ ಸಜ್ಜು!

0
Spread the love

ಮೈಸೂರು: ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ವೇದಿಕೆ ಸಿದ್ಧಗೊಂಡಿದೆ. ನಗರದ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು,

Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.

ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.

ಸಾಧನಾ ಸಮಾವೇಶಕ್ಕೆ ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.


Spread the love

LEAVE A REPLY

Please enter your comment!
Please enter your name here