HomePolitics Newsದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

For Dai;y Updates Join Our whatsapp Group

ಬೆಂಗಳೂರು: ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದು ಮೊಸಳೆ ಕಣ್ಣೀರಿನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗ ಎಚ್.ಡಿ. ದೇವೇಗೌಡರನ್ನು ಅಧಿಕಾರದಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಈಗ ಅದೇ ಕಾಂಗ್ರೆಸ್ ನಾಯಕರು ದೇವೇಗೌಡರ ಬಗ್ಗೆ ಕೃತಕ ಕಾಳಜಿ ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಕಾಡಿದ್ದು, ಅವರ ಪಕ್ಷವನ್ನು ವಿಭಜಿಸಲು ಪ್ರಯತ್ನಿಸಿದೆ ಎಂದು ದೂರಿದ ಅವರು, ಇಂತಹ ಹಿನ್ನೆಲೆಯಿದ್ದರೂ ಕಾಂಗ್ರೆಸ್ ಇನ್ನೂ ಕೊಳಕು ರಾಜಕಾರಣವನ್ನು ಮುಂದುವರಿಸುತ್ತಿದೆ ಎಂದು ಟೀಕಿಸಿದ್ದಾರೆ.

ಭಾರತೀಯ ಜನತಾ ಪಕ್ಷವು ದೇವೇಗೌಡರನ್ನು ಸದಾ ಗೌರವದಿಂದ ನಡೆಸಿಕೊಂಡಿದೆ ಎಂದು ಹೇಳಿದ ವಿಜಯೇಂದ್ರ, ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟುಕೊಂಡು ದೇವೇಗೌಡರು ಜೆಡಿಎಸ್ ಪಕ್ಷವನ್ನು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ.

“ದೇವೇಗೌಡರು ಬಿಜೆಪಿ ಹಾಗೂ ಎನ್‌ಡಿಎಗೆ ನೀಡಿರುವ ಬೆಂಬಲವನ್ನು ಸಹಿಸಿಕೊಳ್ಳಲಾಗದೇ ಕಾಂಗ್ರೆಸ್ ನಾಯಕರು ಅವರ ಹೆಸರನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದು ನಾಚಿಕೆಗೇಡಿತನದ ಪರಮಾವಧಿಯಾಗಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img