ಮದ್ದೂರು: ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಕಳೆದ
ಎರಡೂವರೆ ವರ್ಷದಲ್ಲಿ ಐದು ಲಕ್ಷ ಕೋಟಿ ಹೆಚ್ಚು ಸಾಲ ಮಾಡಿದೆ. ಇದು ಕಾಂಗ್ರೆಸ್ ಆಡಳಿತ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಕಾರ್ಯಕರ್ತ ಮಹದೇವ್ ಅವರು ಇತ್ತೀಚಿಗೆ ನಿಧನರಾದ ಹಿನ್ನೆಲೆಯಲ್ಲಿ, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಗ್ಯಾರಂಟಿ, ಗ್ಯಾರಂಟಿ ಅಂತಾರೆ ಅದನ್ನ ಕೂಡ ಸರಿಯಾಗಿ ಕೊಟ್ಟಿಲ್ಲ.ಯುವನಿಧಿ ಕೊಟ್ಟಿದ್ದಿರಾ? ಚುನಾವಣೆ ಸಂದರ್ಭದಲ್ಲಿ ಮಾತ್ರ ದುಡ್ಡು ಬಿಡುಗಡೆ ಮಾಡ್ತರೆ. ಈ ಸರ್ಕಾರದಲ್ಲಿ ಬಡವರು ಬದಕಲು ಆಗ್ತಿಲ್ಲ ಎಂದು ಕಿಡಿಕಾರಿದರು.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.
ನಮ್ಮ ಪಕ್ಷದ ಬಗ್ಗೆ ಕಲಾಪದಲ್ಲಿ ಕೀಳಾಗಿ ಮಾತನಾಡಿದ್ರು. ಜೆಡಿಎಸ್ 18 ಸೀಟ್ ಮುಂದೆ ಸಿಂಗಲ್ ಡಿಜಿಟ್ ಗೆ ಬರುತ್ತೆ ಅಸ್ತಿತ್ವ ಇಲ್ಲ ಅಂತ ಲೇವಡಿ ಮಾಡಿದ್ರು. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.?
ಅಲ್ಲಿನ ಜನರು ಕಾಂಗ್ರೆಸ್ ಪರಿಸ್ಥಿತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಮ್ಮ ಪಕ್ಷ ಮೇಲೆ ಚಲುವರಾಯಸ್ವಾಮಿಗೆ ಯಾಕೆ ಚಿಂತೆ.
ಬಂಡವಾಳ ಇದ್ದಿದ್ದಕ್ಕೆ ಕುಮಾರಸ್ವಾಮಿಗೆ ರೆಡ್ ಕಾರ್ಪೆಟ್ ಹಾಕಿ ಎನ್.ಡಿ.ಎ ಗೆ ಸೇರಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರಪ್ಪನಾಣೆ ಗೆಲ್ಲಲ್ಲ ಅಂತಾ ಕಾಂಗ್ರೆಸ್ ನವರು ಭಾಷಣ ಬಿಗಿದ್ರು. ಆದ್ರೆ ಮಂಡ್ಯ ಜನರ ಆಶೀರ್ವಾದದಿಂದ ದಾಖಲೆ ಗೆಲುವು ಸಿಕ್ತು. ಬಂಡವಾಳ ಇರೋದಕ್ಕೆ ಕುಮಾರಣ್ಣನ ಗೆಲ್ಲಿಸಿರೋದು ಎಂದು ಹೇಳಿದರು.
ರಾಜ್ಯದ ಜನತೆ ಕುಮಾರಣ್ಣಗೆ ಶಕ್ತಿ ತುಂಬಿದ್ದಾರೆ. ಚುನಾವಣೆಯಲ್ಲಿ ಗೆದ್ದಾಗ ತಲೆ ಎತ್ತಿ ಮೆರೆಯಲ್ಲ, ಸೋತಾಗ ಕೈ ಕಟ್ಟಿ ಮನೆಯಲ್ಲಿ ಕೂರಲಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರುಟಾಂಗ್ ನೀಡಿದರು.


