ವಿಜಯಸಾಕ್ಷಿ ಸುದ್ದಿ, ಗದಗ : ದೇಶದ 7 ರಾಜ್ಯಗಳಲ್ಲಿ ಇತ್ತೀಚೆಗೆ 13 ಸ್ಥಾನಗಳಿಗೆ ನಡೆದ ಉಪಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟವನ್ನು 10 ಸ್ಥಾನಗಳಲ್ಲಿ ಗೆಲ್ಲಿಸುವ ಮೂಲಕ ಕರ್ನಾಟಕ ರಾಜ್ಯದಲ್ಲಿ 3 ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪರವಾಗಿ ಜನರಿದ್ದಾರೆ ಎಂಬ ಸಂದೇಶವನ್ನು ರವಾನಿಸಿದ ಜನತೆ, 3 ಸ್ಥಾನಗಳ ಪೈಕಿ 3ರಲ್ಲೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಯುವನಾಯಕ ಕರೀಮಸಾಬ ಸುಣಗಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎನ್.ಡಿ.ಎ ಮೈತ್ರಿಕೂಟ ಆಡಳಿತ ವೈಖರಿಯನ್ನು ಮೆಚ್ಚದ ಜನತೆ ಆ ಸರಕಾರದ ವಿರುದ್ಧ ಮತ ಚಲಾಯಿಸಿ ಇಂಡಿಯಾ ಮೈತ್ರಿಕೂಟದ ಪರವಾಗಿರುವ ಹಾಗೂ ಎನ್.ಡಿ.ಎ ಅಭ್ಯರ್ಥಿಗಳನ್ನು ತಿರಸ್ಕರಿಸುವ ಅಚಲ ನಿರ್ಧಾರ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಚುನಾವಣೆ ಪೂರ್ವದಲ್ಲಿಯೇ ಜನರ ಸಂಕಷ್ಟ ನೋವು-ನಲಿವು ಅರಿತು ಅದಕ್ಕೆ ಪರಿಹಾರವಾಗಿ ಪಂಚ ಗ್ಯಾರಂಟಿಗಳನ್ನು ಪೂರೈಸುವ ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿದ ತಕ್ಷಣವೇ ಜನರಿಗೆ ಕೊಟ್ಟ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಈಡೇರಿಸಿದೆ. ಈ ವಿಶ್ವಾಸದ ಆಧಾರದ ಮೇಲೆ ಉಪಚುನಾವಣೆಯಲ್ಲಿ ಆ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯದ ಮಾಲೆಯನ್ನು ಧರಿಸಲಿದ್ದಾರೆ ಎಂಬ ಅಚಲ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.