ವಿಜಯಸಾಕ್ಷಿ ಸುದ್ದಿ, ಗದಗ : ಮತದಾರ ತನ್ನ ಇತಿ-ಮಿತಿಗಳನ್ನು ಅರಿತು, ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ, ಯೋಗ್ಯ ಅಭ್ಯರ್ಥಿಯನ್ನು ನಿರ್ಭೀತಿಯಿಂದ ಚುನಾವಣೆಯಲ್ಲಿ ಆರಿಸಿ ಕಳಿಸಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಸನ್ಮಾರ್ಗ ಮಹಾವಿದ್ಯಾಲಯದ ಚೇರಮನ್ ರಾಜೇಶ ಕುಲಕರ್ಣಿ ಹೇಳಿದರು.
ಅವರು ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ಮಹತ್ವದ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಗತಿ ಪರದೇಶಕ್ಕೆ ಪ್ರಜ್ಞಾವಂತ ಪ್ರಜೆಯೇ ಪ್ರಮುಖ ಆಸ್ತಿ. ಪ್ರತಿ 5 ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರಾದ ನಾವು ನೀವೆಲ್ಲರೂ ನಮ್ಮ ನಮ್ಮ ಜವಾಬ್ದಾರಿ, ಕರ್ತವ್ಯಗಳನ್ನು ಅರಿತು ಯೋಗ್ಯ ವ್ಯಕ್ತಿಗೆ ಮತದಾನ ಮಾಡಿದಲ್ಲಿ ನಮ್ಮ ದೇಶ ಹೆಚ್ಚಿನ ಪ್ರಗತಿ ಸಾಧಿಸುವುದರಲ್ಲಿ ಸಂದೇಹವೇ ಇಲ್ಲ ಎಂದರು.
ಪ್ರೊ. ರಾಹುಲ್ ಒಡೆಯರ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪ್ರೊ. ಉಡುಪಿ ದೇಶಪಾಂಡೆ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಪ್ರೊ. ಸೈಯದ್ ಮುಲ್ಲಾ, ಪ್ರೊ. ರೋಹಿತ್ ಒಡೆಯರ್, ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.