ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ರವಿವಾರ ಗದುಗಿನ ವಾರ್ಡ್ ನಂ. 30ರ ವಾಂಬೆ ಬಡಾವಣೆಯಲ್ಲಿ ರಾಜಕಾಲುವೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.
Advertisement
ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ಈ ರಾಜಕಾಲುವೆ ಅಂದಾಜು ಮೊತ್ತ 1.65 ಕೋಟಿ ರೂ.ಗಳಾಗಿದ್ದು, ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನಿಂದ ವಾಂಬೆ ಬಡಾವಣೆಗೆ ಮಳೆ ನೀರು ಪ್ರವೇಶಿಸುವುದನ್ನು ತಡೆಯಲು ಶಾಶ್ವತ ಪರಿಹಾರವಾಗಿ, ಮಳೆ ನೀರು ಸರಾಗವಾಗಿ ಸಾಗಲು ಚರಂಡಿ ನಿರ್ಮಾಣ ಮಾಡಲಾಗುತ್ತಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಆಂಜನೇಯ ಕಟಗಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸೇರಿದಂತೆ ಸ್ಥಳೀಯ ಗಣ್ಯರು, ಸಾರ್ವಜನಿಕರು ಇದ್ದರು.