ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿಯ ತಹಸೀಲ್ದಾರ ಕಚೇರಿಯಲ್ಲಿ ಕಂದಾಯ ಇಲಾಖೆ ವತಿಯಿಂದ ಬಿಡುಗಡೆಯಾಗಿದ್ದ 25 ಲಕ್ಷ ರೂ ವೆಚ್ಚದ ಕಂದಾಯ ಸಭಾಭವನ ನಿರ್ಮಾಣಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಶಿರಹಟ್ಟಿಯ ತಹಸೀಲ್ದಾರ ಕಚೇರಿಯಲ್ಲಿ ಈಗಿರುವ ಸಭಾಭವನ ಇಕ್ಕಟ್ಟಾಗಿದ್ದು, ಸಭೆಗಳನ್ನು ನಡೆಸಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ವರದಿಯನ್ನು ಸಲ್ಲಿಸಲಾಗಿತ್ತು. ಅದರಂತೆ ಇದೀಗ 25 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಾಣ ಮಾಡಲಾಗುವುದು. ನಂತರ ಅದಕ್ಕೆ ಅಗತ್ಯವಿರುವ ಪೀಠೋಪಕರಣಕ್ಕಾಗಿ ಶಾಸಕರ ನಿಧಿಯಿಂದ ಅನುದಾನ ಒದಗಿಸಲಾಗುವುದು ಎಂದರು.
ತಹಸೀಲ್ದಾರ ಅನಿಲ ಬಡಿಗೇರ, ಪ.ಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟಿಹಳ್ಳಿ, ಮಾರ್ತಾಂಡಪ್ಪ ಹಾದಿಮನಿ, ಶರಣಪ್ಪ ಹರ್ಲಾಪೂರ, ಬಸವರಾಜ ಪೂಜಾರ, ಕಂದಾಯ ನಿರೀಕ್ಷಕ ಬಿ.ಎಸ್. ಕಾತ್ರಾಳ, ನಿರ್ಮಿತಿ ಕೇಂದ್ರದ ವಿಜಯ ಯಳಮಲಿ ಮುಂತಾದವರು ಉಪಸ್ಥಿತರಿದ್ದರು.