ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಇನ್ನೂ ಭಾರೀ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Advertisement
ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಶವಗಳನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.