ಚೆನ್ನೈ:- ಚೆನ್ನೈ ಸಮೀಪದ ಪಲ್ಲಾವರಂ ಎಂಬಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಅಲ್ಲದೇ ಘಟನೆಯಿಂದ 20ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ. 56 ವರ್ಷದ ತಿರುವೀತಿ, 42 ವರ್ಷದ ಮೋಹನರಂಗಂ, 88 ವರ್ಷದ ವರಲಕ್ಷ್ಮಿ ಮೃತರು. 20 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಕ್ರೋಮ್‌ಪೇಟೆ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಫೆಂಗಲ್ ಚಂಡಮಾರುತದಿಂದಾಗಿ ಪಲ್ಲಾವರಂನಲ್ಲಿ ಇತ್ತೀಚಿಗೆ ಸುರಿದ ಮಳೆಯ ಪರಿಣಾಮ ಕೊಳಚೆ ನೀರು ಮತ್ತು ಕುಡಿಯುವ ನೀರು ಮಿಶ್ರಣವಾಗಿ ಕಲುಷಿತಗೊಂಡಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.