HomeKarnataka Newsಇನ್‌ಸ್ಟಾಗ್ರಾಂ ಮೂಲಕ ಪಾಕ್ ಗ್ಯಾಂಗ್ ಜೊತೆ ಸಂಪರ್ಕ? ದೊಡ್ಡಬಳ್ಳಾಪುರದಲ್ಲಿ ಶಂಕಿತ ಅರೆಸ್ಟ್!

ಇನ್‌ಸ್ಟಾಗ್ರಾಂ ಮೂಲಕ ಪಾಕ್ ಗ್ಯಾಂಗ್ ಜೊತೆ ಸಂಪರ್ಕ? ದೊಡ್ಡಬಳ್ಳಾಪುರದಲ್ಲಿ ಶಂಕಿತ ಅರೆಸ್ಟ್!

For Dai;y Updates Join Our whatsapp Group

ದೇವನಹಳ್ಳಿ: ಹುಬ್ಬಳ್ಳಿ ಹಾಗೂ ಜಿಗಣಿ ಪ್ರಕರಣಗಳ ಬೆನ್ನಲ್ಲೇ ಬೆಂಗಳೂರು ಹೊರವಲಯದಲ್ಲಿ ದೇಶವಿರೋಧಿ ಹಾಗೂ ಉಗ್ರ ಚಟುವಟಿಕೆಗಳಿಗೆ ತರಬೇತಿ ಪಡೆಯುತ್ತಿದ್ದ ಆರೋಪದ ಮೇಲೆ ಶಂಕಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ ಶಂಕಿತನಾಗಿದ್ದಾನೆ.

ಕೇಂದ್ರ ಗುಪ್ತಚರ ಇಲಾಖೆ ಹಾಗೂ ಕೌಂಟರ್ ಇಂಟಲಿಜೆನ್ಸ್ ಸೆಲ್ ನೀಡಿದ ಮಾಹಿತಿಯ ಆಧಾರದ ಮೇಲೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಸೈಯದ್ ಅಬೂಬಕರ್ ಮನೆ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಪಾಕ್ ಗ್ಯಾಂಗ್ ಸಂಪರ್ಕ?

ವೃತ್ತಿಯಲ್ಲಿ ಎಸಿ ಮೆಕ್ಯಾನಿಕ್ ಆಗಿದ್ದ ಸೈಯದ್ ಅಬೂಬಕರ್ ಬೆಂಗಳೂರಿನ ಮಸೀದಿಯೊಂದರಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಎನ್ನಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜತೆ ಸಂಪರ್ಕ ಹೊಂದಿದ್ದ ಆರೋಪ ಕೇಳಿಬಂದಿದೆ.

ಪಾಕಿಸ್ತಾನದ ಶಾಜದ್ ಬುಟ್ಟಿ ನೆಟ್‌ವರ್ಕ್‌ಗೆ ಸಂಬಂಧಿಸಿದ ‘Hammadmemon333’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ಸೈಯದ್ ಅಬೂಬಕರ್ ಬಳಸುತ್ತಿದ್ದ ಎನ್ನಲಾಗಿದೆ. ಈ ಖಾತೆಯ ಮೂಲಕ ಗಣ್ಯರು ಹಾಗೂ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ತನಿಖೆ ನಡೆಯುತ್ತಿದೆ.

ತನ್ನ ಆಧಾರ್ ಕಾರ್ಡ್ ಸೇರಿದಂತೆ ಪ್ರಮುಖ ವೈಯಕ್ತಿಕ ದಾಖಲೆಗಳನ್ನು ಬಳಸಿ ಖಾತೆಗೆ ಲಾಗಿನ್ ಮಾಡಿದ್ದ ಎಂಬ ಆರೋಪವೂ ಕೇಳಿಬಂದಿದೆ. ಈ ಆರೋಪಗಳ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕೇರಳ, ದೆಹಲಿಯಲ್ಲಿ ರಹಸ್ಯ ತರಬೇತಿ ಆರೋಪ:

ಪಾಕಿಸ್ತಾನಿ ಗ್ಯಾಂಗ್‌ನ ಸೂಚನೆಯಂತೆ ಭಾರತದಲ್ಲಿ ಕಾರ್ಯಾಚರಣೆ ನಡೆಸಲು ಸೈಯದ್ ಅಬೂಬಕರ್‌ನನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಗ್ಯಾಂಗ್‌ನ ಸೂಚನೆಯ ಮೇರೆಗೆ ಆತ ಕೇರಳ ಹಾಗೂ ದೆಹಲಿಗೆ ತೆರಳಿ ರಹಸ್ಯ ತರಬೇತಿ ಪಡೆದಿದ್ದ ಎನ್ನಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಯುವಕರನ್ನು ಸೆಳೆದು ದೇಶವಿರೋಧಿ ಚಟುವಟಿಕೆಗಳಿಗೆ ತರಬೇತಿ ನೀಡಲಾಗುತ್ತಿದೆಯೇ ಎಂಬ ಬಗ್ಗೆಯೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ. ಬಂಧಿತನ ಸಂಪರ್ಕದಲ್ಲಿದ್ದವರು ಯಾರು, ಈ ಜಾಲದ ಹಿಂದೆ ಮತ್ತಷ್ಟು ಮಂದಿ ಇದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಹಣಕಾಸು ವಹಿವಾಟಿನ ಬಗ್ಗೆಯೂ ತನಿಖೆ:

ಪಾಕಿಸ್ತಾನಿ ಗ್ಯಾಂಗ್‌ಗಳೊಂದಿಗೆ ಸೈಯದ್ ಅಬೂಬಕರ್‌ಗೆ ಹಣಕಾಸಿನ ವಹಿವಾಟು ನಡೆದಿತ್ತೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಆತನಿಗೆ ಯಾರಾದರೂ ಸಹಕರಿಸಿದ್ದಾರೆಯೇ ಎಂಬ ಆಯಾಮದಲ್ಲೂ ವಿಚಾರಣೆ ಮುಂದುವರಿದಿದೆ.

ಸೈಯದ್ ಅಬೂಬಕರ್ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್‌ 113(3) ಹಾಗೂ 197(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಶಂಕಿತನ ಸಂಪರ್ಕ ಜಾಲ ಹಾಗೂ ಆತನ ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img