ಮಂಡ್ಯ: ಕಲುಷಿತ ಆಹಾರ ಸೇವನೆಯಿಂದಾಗಿ 38 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದ ಮೇಘಾಲಯ ರಾಜ್ಯದ ಹಾಗೂ ಸ್ಥಳೀಯ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ.
Advertisement
ಇನ್ನೂ ಈ ಘಟನೆಯಲ್ಲಿ ಮೇಘಾಲಯ ಮೂಲದ ಕೇರ್ ಲಾಂಗ್ (14) ಮತ್ತು ನಾಮೀಬಂತೈ (12)ಎಂಬ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. 38 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ದಾಖಲಿಸಲಾಗಿತ್ತು.
ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಘಾಲಯದ 22 ವಿದ್ಯಾರ್ಥಿಗಳು ಹಾಗೂ ಮಳವಳ್ಳಿಯ 7 ವಿದ್ಯಾರ್ಥಿಗಳು ಒಟ್ಟು 29 ವಿದ್ಯಾರ್ಥಿಗಳು ಸಂಪೂರ್ಣವಾಗಿ ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಡಿಸ್ಚಾಜ್೯ ಮಾಡಲಾಗಿದೆ.