Bomb threat: ದೆಹಲಿ ಶಾಲೆಗಳಿಗೆ ಮುಂದುವರಿದ ಬಾಂಬ್ ಬೆದರಿಕೆ ಕರೆ: ತೀವ್ರ ಶೋಧ

0
Spread the love

ನವದೆಹಲಿ: ಇತ್ತಿಚೆಗೆ ದೆಹಲಿಯ ಶಾಲೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬರುತ್ತಿವೆ.  ಇದೀಗ ರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸ್ಥಳಾಂತರ ಮಾಡಲಾಗಿದೆ.

Advertisement

ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ. ಡಿಪಿಎಸ್​ ದ್ವಾರಕಾ ಹಾಗೂ ನಜಾಫ್ ಗಡ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಪರೀಕ್ಷೆಗಳ ಸಮಯದಲ್ಲಿ ಬಾಂಬ್ ಬೆದರಿಕೆ ಕರೆ ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ವಿಚಾರವಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾವು ಕ್ಯಾಂಪಸ್​ನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here