ಶಿವಮೊಗ್ಗ: ಕರ್ನಾಟಕದಲ್ಲಿ ಇಡಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಕಾಂಗ್ರೆಸ್ ಮುಖಂಡ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.
Advertisement
7 ಅಧಿಕಾರಿಗಳ ನೇತೃತ್ವದ ತಂಡ ಸತತ 18 ಗಂಟೆಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಅಲ್ಲದೇ ಅಧಿಕಾರಿಗಳು ಉದ್ಯಮಿಯನ್ನು ವಿಚಾರಣೆ ನಡೆಸಿದ್ದಾರೆ. ಟಿಪ್ ಟಾಪ್ ಬಷೀರ್ ಅವರು ನಗರಸಭಾ ಸದಸ್ಯರಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.
ಇನ್ನೂ ಇಡಿ ಅಧಿಕಾರಿಗಳು, ಇತ್ತೀಚೆಗೆ ಕಾಂಗ್ರೆಸ್ ನ ಹಲವು ಮುಖಂಡರ ಮನೆ ಮೇಲೆ ದಾಳಿ ಮಾಡಿತ್ತು. ಈ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿತ್ತು