ಬೀದರ್: ರಾಜ್ಯದಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.
Advertisement
ತನ್ನ ಸಾವಿಗೂ ಮುನ್ನ ಸಚಿನ್ ಬರೆದಿಟ್ಟ ಡೆತ್ ನೋಟ್‌ನಲ್ಲಿ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ನಗರ ಬಿಜೆಪಿ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಚಿತ್ತಾಪುರದ ಮಣಿಕಂಠ ರಾಠೋಡ್ ಹಾಗೂ ಶಾಸಕ ಬಸವರಾಜ್ ಮತ್ತಿಮೂಡ ಹತ್ಯೆಗೂ ಸಂಚು ರೂಪಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು.
ಈ ಬಗ್ಗೆ ಕೂಲಂಕುಷ ತನಿಖೆ ಕೈಗೊಳ್ಳಲು ಜ.29 ಮತ್ತು 30ರ ಪೈಕಿ ಯಾವುದಾದರೂ ಒಂದು ದಿನ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿದ್ದಲಿಂಗ ಸ್ವಾಮೀಜಿಗೆ ಸಿಐಡಿ ನೋಟಿಸ್ ನೀಡಿದೆ.