ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

0
Spread the love

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಡೆತ್ನೋಟ್ನಲ್ಲಿ ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಗೆ ಆರೋಪ ಮಾಡಲಾಗಿದೆ. ಹೀಗಾಗಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು,

Advertisement

ಆರೋಪಪ್ರತ್ಯಾರೋಪಗಳು ಜೋರಾಗಿದೆ. ಇದರ ಮಧ್ಯ  ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ ನೀಡುವ ಮೊದಲೇ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಮೃತ ಸಚಿನ್ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ಕುಟುಂಬಸ್ಥರ ಭೇಟಿ ಬಳಿಕ ಮಾಧ್ಯಮದವರ ಜೊತೆಗೆ ಮಾತಾಡಿದ ಖಂಡ್ರೆ, ಸಚಿನ ಆತ್ಮಹತ್ಯೆ ಒಂದುನೋವಿನ ಸಂಗತಿಯಾಗಿದೆ.‌ ಇದು ಖೇದಕರ ಸಂಗತಿ. ನಾನು ನಮ್ಮ ಸರಕಾರ ಸಚಿನ್ ಕುಟುಂಬಸ್ಥರ ಜೊತೆಗೆ ಇದ್ದೇವೆ. ನಾನು ಸಚಿನ್ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದೇನೆ.

ಸಚಿನ್ ಆತ್ಮಹತ್ಯೆ ಕೇಸ್ ನಿರ್ಲಕ್ಷ್ಯ ಮಾಡಿದ ಪೊಲೀಸರು ಮೇಲೆ ಕ್ರಮವಾಗುತ್ತೆ. ಕೇಸ್ ರೈಲ್ವೇ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೇಸ್ ತನಿಕೆ ನ್ಯಾಯಯುತವಾಗಿ ನಡೆಯುತ್ತೆ. ಪ್ರಕರಣದಲ್ಲಿ ಯಾರೇ ಇರಲಿ ಅವರ ಮೇಲೆ ಕಾನೂನು ರೀತಿ ಕ್ರಮವಾಗುತ್ತದೆ. ಸಚಿನ್ ಕುಟುಂಬಕ್ಕೆ ಸರಕಾರ ಹಾಗೂ ಖಾಸಗಿಯಾಗಿ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here