ಅಕ್ರಮ ಮರಳು ಸಾಗಾಟ ನಿಯಂತ್ರಿಸಿ

0
Control illegal sand traffic
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕು ವ್ಯಾಪ್ತಿಯ ಅಕ್ಕಿಗುಂದ, ಬಟ್ಟೂರ, ಬಡ್ನಿ, ಅಮರಾಪೂರ, ಹುಲ್ಲೂರು, ಅದರಹಳ್ಳಿ, ಕೊಗನೂರ ಗ್ರಾಮ ವ್ಯಾಪ್ತಿಯ ಸರ್ಕಾರಿ ಹಳ್ಳ, ಮಾಲ್ಕೀ ಜಮೀನಿನಲ್ಲಿ ಮರಳು ಅಕ್ರಮ ಗಣಿಗಾರಿಕೆ, ಸಾಗಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶರಣು ಗೋಡಿ ನೇತೃತ್ವದಲ್ಲಿ ತಹಸೀಲ್ದಾರ ವಾಸುದೇವ ಸ್ವಾಮಿ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

Advertisement

ತಾಲೂಕಿನಲ್ಲಿ ಮರಳು ಅಕ್ರಮ ಸಾಗಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮರಳು ಸಾಗಿಸುವ ಟಿಪ್ಪರ್ ಮತ್ತು ಲಾರಿಗಳು ಪಾಸ್ ತೆಗೆದುಕೊಂಡರೂ ಒಂದೇ ಪಾಸ್‌ನಲ್ಲಿ ಎಲ್ಲೆಂದರಲ್ಲಿಗೆ ನಾಲ್ಕೈದು ಬಾರಿ ಮರಳು ಸಾಗಾಟ ಮಾಡುತ್ತಿದ್ದಾರೆ. ಲಾರಿ ಮತ್ತು ಟಿಪ್ಪರ್‌ಗಳಿಗೆ ಜಿಪಿಎಸ್ ಇದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಕಣ್ಣು ತಪ್ಪಿಸಿ ಜಿಪಿಎಸ್ ಬಂದ್ ಮಾಡಿ ಮರಳು ಗುತ್ತಿಗೆದಾರರ ಜೊತೆ ಹೊಂದಾಣಿಕೆಯಾಗಿ ಸಕ್ರಮದ ಜೊತೆ ಅಕ್ರಮ ಮರಳು ಸಾಗಣೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದಾರೆ. ಮರಳು ದಂಧೆಕೋರರ ಮೇಲೆ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ತಾಲೂಕಾಧ್ಯಕ್ಷ ನಾಗೇಶ ಅಮರಾಪುರ, ಜಿಲ್ಲಾ ಕಾರ್ಯಾಧ್ಯಕ್ಷ ಇಸ್ಮಾಯಿಲ್ ಆಡೂರ, ಪ್ರವೀಣ ಆಚಾರಿ, ಯಲ್ಲಪ್ಪ ಹಂಜಗಿ, ಅಷ್ಪಾಕ ಬಾಗೋಡಿ, ಕೈಸರ ಮಹಮ್ಮದ ಅಲಿ, ಅಭಿಷೇಕ ಸಾತಪುತೆ, ದುದ್ದು ಅಕ್ಕಿ, ನಾಸೀರ ಸಿದ್ದಿ, ಸುಲೇಮಾನ ಬಾರಿಗಿಡದ, ಮುಕ್ತಿಯಾರ ಜಮಖಂಡಿ, ನದಿಮ್ ಕುಂದಗೋಳ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.


Spread the love

LEAVE A REPLY

Please enter your comment!
Please enter your name here