ಬೆಂಗಳೂರು:- RSS-ಬಜರಂಗದಳದ ಬಗ್ಗೆ ಬಹಿರಂಗವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ CM ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ಬಜರಂಗದಳ ವಿರುದ್ಧ ಸದನದಲ್ಲೇ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದರು. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಆದ್ರೆ, ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.