ವಿವಾದಾತ್ಮಕ ಹೇಳಿಕೆ ಹಿನ್ನಲೆ: ಕೇಂದ್ರ ಸಚಿವ ರವನೀತ್ ಸಿಂಗ್ ವಿರುದ್ಧ FIR

0
Spread the love

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಹುಲ್ ಗಾಂಧಿ ಉಗ್ರ ಎಂದು ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕೆಪಿಸಿಸಿ ಲೀಗಲ್ ಸೆಲ್​ನಿಂದ ದೂರು ದಾಖಲಾಗಿದೆ. ಅಮೆರಿಕ ಪ್ರವಾಸದ ವೇಳೆ ಭಾರತದಲ್ಲಿ ಸಿಖ್​ರ ಪರಿಸ್ಥಿತಿ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದರು.

Advertisement

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಅವರು ಆ ಬಾಂಬ್ ತಯಾರಕರು ರಾಹುಲ್​ರನ್ನು ಬೆಂಬಲಿಸುತ್ತಿದ್ದಾರೆ ಅಂದರೆ ಆತ ನಂಬರ್​ 1 ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here