HomeIndia Newsವಿವಾದಾತ್ಮಕ ಹೇಳಿಕೆ: ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ವಿವಾದಾತ್ಮಕ ಹೇಳಿಕೆ: ನವಜೋತ್ ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

For Dai;y Updates Join Our whatsapp Group

ಚಂಡೀಗಢ:- ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗಬೇಕಾದರೆ “500 ಕೋಟಿ” ಕೊಡಬೇಕು ಎಂಬ ಹೇಳಿಕೆ ನೀಡಿದ ಬಳಿಕ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕ್ರಿಕೆಟಿಗ-ರಾಜಕಾರಣಿ, ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಸಿಎಂ ಸ್ಥಾನಕ್ಕೆ “500 ಕೋಟಿ ರೂ.ಗಳ ಸೂಟ್‌ಕೇಸ್” ನೀಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ತಂದಿದ್ದರು. ಅವರ ವಿವಾದಾತ್ಮಕ ಹೇಳಿಕೆಯ ಬಳಿಕ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತುಗೊಳಿಸಿದೆ.

500 ಕೋಟಿ ರೂ. ಸೂಟ್‌ಕೇಸ್ ನೀಡುವವರು ಮುಖ್ಯಮಂತ್ರಿಯಾಗುತ್ತಾರೆ” ಎಂಬ ಅವರ ಹೇಳಿಕೆಯಿಂದ ನವಜೋತ್ ಕೌರ್ ಭಾರಿ ವಿವಾದಕ್ಕೀಡಾಗಿದ್ದರು. ಇದರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆರೋಪಗಳನ್ನು ಮಾಡಿತ್ತು. ಆಮ್ ಆದ್ಮಿ ಪಕ್ಷ ಕೂಡ ಕಾಂಗ್ರೆಸ್ ವಿರುದ್ಧ ಈ ಹೇಳಿಕೆಯನ್ನು ದಾಳವಾಗಿಸಿಕೊಂಡಿತ್ತು.

ತನ್ನ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ್ದ ಕಾಂಗ್ರೆಸ್ ನಾಯಕಿಯೂ ಆಗಿರುವ ನವಜೋತ್ ಕೌರ್, “ನಮ್ಮ ಕಾಂಗ್ರೆಸ್ ಪಕ್ಷವು ನಮ್ಮಿಂದ ಎಂದಿಗೂ ಏನನ್ನೂ ಬೇಡಿಕೆ ಇಟ್ಟಿಲ್ಲ. ಬೇರೆ ಪಕ್ಷದಿಂದ ನಮಗೆ ಸಿಎಂ ಸ್ಥಾನದ ಆಮಿಷವಿದೆಯೇ ಎಂದು ಕೇಳಿದಾಗ ನಾನು ಸಿಎಂ ಹುದ್ದೆಗೆ ನೀಡಲು ನಮ್ಮಲ್ಲಿ 500 ಕೋಟಿ ರೂ. ಹಣವಿಲ್ಲ ಎಂದು ಹೇಳಿದ್ದೆ. ನಮ್ಮ ಪಕ್ಷದ ಬಗ್ಗೆ ನಾನು ಮಾತಾಡಿಲ್ಲ ಎಂದು ಹೇಳಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಅವರು ಸ್ಪಷ್ಟೀಕರಣ ನೀಡಿದ್ದರೂ ಅದು ಕಾಂಗ್ರೆಸ್​​ಗೆ ಸಮಾಧಾನ ತರಲಿಲ್ಲ. ಹೀಗಾಗಿ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img