ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಹಕರಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ 24/7 ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು, ಕಾನೂನು ಬಾಹಿರ ಚಟುವಟಿಕೆ ತಡೆಯಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಗದಗ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಹೇಳಿದರು.

Advertisement

ಅವರು ರವಿವಾರ ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಆತ್ಮೀಯವಾಗಿ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕಗಳಿಗೂ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ತಿಳಿದುಕೊಂಡು ಕಾನೂನು ಬಾಹಿರ ಚಟುವಟಿಕೆ ತಡೆಯುವ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಲಕ್ಷ್ಮೇಶ್ವರ 50 ಸಾವಿರ ಜನಸಂಖ್ಯೆ ಹೊಂದಿರುವ ಬೆಳೆಯುತ್ತಿರುವ ಪಟ್ಟಣ, ತಾಲೂಕು ಕೇಂದ್ರವಾಗಿದ್ದು, ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ. ಅದಕ್ಕಾಗಿ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಬೇಕಿದೆ. ಇದು ಸರ್ಕಾರದ ಹಂತದಲ್ಲಿ ಆಗಬೇಕಾಗಿದ್ದು, ಆದ್ಯತಾನುಸಾರ ಸಿಬ್ಬಂದಿಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ, ವಾಹನ ದಟ್ಟಣೆ ನಿಯಂತ್ರಣಕ್ಕೆ ಈಗಾಗಲೇ ಇಲ್ಲಿನ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಸಾರ್ವಜನಿಕರ ಸಹಕಾರ ಅವಶ್ಯವಾಗಿದೆ ಎಂದು ಹೇಳಿದರು.

ಈ ವೇಳೆ ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಪಿಎಸ್‌ಐ ನಾಗರಾಜ ಗಡಾದ, ಕ್ರೈಂ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ ಮತ್ತು ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here