HomeGadag Newsವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಸಹಕಾರ ಅಗತ್ಯ: ಡಾ. ರೇಷ್ಮಾ

ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಸಹಕಾರ ಅಗತ್ಯ: ಡಾ. ರೇಷ್ಮಾ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಸೇವೆ ನೀಡುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ಮೇಲಿನ ಯಾವುದೇ ರೀತಿಯ ಹಿಂಸಾಚಾರವನ್ನು ತಡೆಗಟ್ಟಲು ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮುಖ್ಯ ಅತಿಥಿಗಳಾದ ಡಾ. ರೇಷ್ಮಾ ಹಾಗೂ ಡಾ. ಸುನಿತಾ ಕೆ. ಕರೆ ನೀಡಿದರು.

ಗದಗ-ಬೆಟಗೇರಿಯ ಬಾಸೆಲ್ ಮಿಷನ್ ಸಿಎಸ್‌ಐ ಆಸ್ಪತ್ರೆ ಮತ್ತು ನರ್ಸಿಂಗ್ ಕಾಲೇಜು, ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿ (IAP) ಗದಗ ಘಟಕ, ಐಎಂಎ ಲೇಡೀಸ್ ವಿಂಗ್ ಹಾಗೂ ಇನ್ನರ್‌ವೀಲ್ ಕ್ಲಬ್ ಗದಗ-ಬೆಟಗೇರಿ ಇವರ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಹಾಗೂ ವೈದ್ಯರ ಮೇಲಿನ ಹಿಂಸಾಚಾರ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರೋಗ್ಯ ಸೇವೆಯಲ್ಲಿ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ರೋಗಿಗಳು ಹಾಗೂ ಅವರ ಕುಟುಂಬಸ್ಥರು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯೊಂದಿಗೆ ಸಹಕಾರದಿಂದ ವರ್ತಿಸಬೇಕು. ಯಾವುದೇ ಕಾರಣಕ್ಕೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಅಜಯ ಎಸ್. ರಾಜು ಮಾತನಾಡಿ, ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಸ್ತನ್ಯಪಾನದ ಮಹತ್ವವನ್ನು ವಿವರಿಸಿದರು. ನವಜಾತ ಶಿಶುವಿಗೆ ತಾಯಿಯ ಹಾಲೇ ಅತ್ಯುತ್ತಮ ಪೌಷ್ಟಿಕ ಆಹಾರವಾಗಿದ್ದು, ಮಗುವಿನ ಜನನದ ನಂತರ ಮೊದಲ ಆರು ತಿಂಗಳು ತಾಯಿಯ ಹಾಲನ್ನೇ ನೀಡುವಂತೆ ತಾಯಂದಿರನ್ನು ಪ್ರೋತ್ಸಾಹಿಸಬೇಕು ಎಂದರು.

ಡಾ. ರೋಷ್ನಾ ಹಾಗೂ ಡಾ. ತೇಜಸ್ವಿನಿ ಎಚ್. ಅವರು ಸ್ತನ್ಯಪಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಯಿಯ ಹಾಲಿನಲ್ಲಿರುವ ಪೌಷ್ಟಿಕಾಂಶ, ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಅದರ ಪಾತ್ರ, ಸರಿಯಾದ ಸ್ತನ್ಯಪಾನ ವಿಧಾನ ಹಾಗೂ ತಾಯಂದಿರು ಎದುರಿಸುವ ಸಾಮಾನ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾದ ಡಾ. ರೇಷ್ಮಾ ಹಾಗೂ ಡಾ. ಸುನಿತಾ ಕೆ. ಅವರು ತಾಯಿ-ಮಗು ಆರೋಗ್ಯದ ಮಹತ್ವದ ಕುರಿತು ಮಾತನಾಡಿದರು.

ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ ಮಾತನಾಡಿ, ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಆರೋಗ್ಯ ಸೇವೆ ನೀಡುವ ಸಂದರ್ಭದಲ್ಲಿ ವೈದ್ಯರು ಮತ್ತು ಸಿಬ್ಬಂದಿಗೆ ಸುರಕ್ಷಿತ ಹಾಗೂ ಗೌರವಯುತ ವಾತಾವರಣ ಕಲ್ಪಿಸಬೇಕು. ಸಾರ್ವಜನಿಕರು, ರೋಗಿಗಳು ಹಾಗೂ ಅವರ ಕುಟುಂಬಸ್ಥರು ಸಹಕರಿಸುವ ಮೂಲಕ ವೈದ್ಯರ ಮೇಲಿನ ಹಿಂಸಾಚಾರ ತಡೆಗೆ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ವೈದ್ಯಕೀಯ ತಜ್ಞರಾದ ಡಾ. ಸಂಜೀವ್ ಜೋಶಿ, ಡಾ. ಸಾದಿಕಾ ನೂರಾನಿ, ಬಿಎಂ ಸಿಎಸ್‌ಐ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಪ್ರೊ. ಬ್ಯೂಲಾ ಪ್ರಿಯದರ್ಶಿನಿ ಉಪಸ್ಥಿತರಿದ್ದರು. ಇತರ ವೈದ್ಯರು, ನರ್ಸಿಂಗ್ ಸಿಬ್ಬಂದಿ, ವಿದ್ಯಾರ್ಥಿಗಳು, ಇನ್ನರ್‌ವೀಲ್ ಕ್ಲಬ್ ಸದಸ್ಯರು ಹಾಗೂ ಗಣ್ಯರು ಭಾಗವಹಿಸಿದ್ದರು.

ಶ್ರೀಮತಿ ಮರ್ಲಿನ್‌ಜೋ ಸೆಫಾ ಕಾರ್ಯಕ್ರಮ ನಿರೂಪಿಸಿದರು. ಡಾ. ಶಿಲ್ಪಾ ಧಡೂತಿ ವಂದನಾರ್ಪಣೆ ಸಲ್ಲಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img