ಕಾರವಾರ: ಕೇರಳದಲ್ಲಿ ಕಾಣಿಸಿಕೊಂಡಿರೋ ಹೆಮ್ಮಾರಿ ಭೀತಿ ರಾಜ್ಯಕ್ಕೂ ತಟ್ಟಿದ್ದು, ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆದ್ರೆ ಇದೀಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಗೂ ಕೊರೊನಾ ಸೋಂಕು ಕಾಲಿಟ್ಟಿದೆ. ಕಾರವಾರ ತಾಲೂಕಿನ ಸದಾಶಿವಗಡ ಗ್ರಾಮದ ಯುವಕನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಗೋವಾದಿಂದ ಕಾರವಾರಕ್ಕೆ ಬಂದಿದ್ದ ಯುವಕನೋರ್ವನಲ್ಲಿ ಕಳೆದ 15 ದಿನಗಳ ಹಿಂದೆ ಸೋಂಕು ಪತ್ತೆಯಾಗಿದ್ದು,
ಈಗ ಆರ್‌ಟಿಪಿಸಿಆರ್ ರಿಪೋರ್ಟ್ ನೆಗೆಟಿವ್ ಬಂದಿದೆ. ಒಟ್ಟು 15ರಿಂದ 20 ಜನರಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಸದಸ್ಯರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಲಸಿಕೆ ಪಡೆದ ಹಿನ್ನೆಲೆ ಕೇವಲ 3ರಿಂದ 4 ದಿನಗಳಲ್ಲಿ ಪೂರ್ತಿ ಗುಣಮುಖರಾಗಿದ್ದಾರೆ.
ಚಳಿಗಾಲದ ಹಿನ್ನೆಲೆ ಹೆಚ್ಚು ಜನರಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಲಕ್ಷಣ ಹೆಚ್ಚಾಗಿ ಕಂಡು ಬಂದಲ್ಲಿ ಮಾತ್ರ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಹೊಸ ವರ್ಷಕ್ಕೆ ಹೊರ ರಾಜ್ಯಗಳಿಂದ ಹೆಚ್ಚಿನ ಜನ ಕಾರವಾರಕ್ಕೆ ಬರುವ ಹಿನ್ನೆಲೆ ಮುಂಜಾಗೃತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.