ಬೆಂಗಳೂರು: ಮತ್ತೆ ವಕ್ಕರಿಸಿರುವ ಕೊರೊನಾ ಮಹಾಮಾರಿ ದಿನ ಕಳೆದಂತೆ ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದೆ. ದಿನೇ ದಿನೇ ದೇಶದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದ್ದು, ಇಂದಿಗೆ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 2,710ಕ್ಕೆ ಏರಿಕೆ ಆಗಿದೆ.
ಇದರ ನಡುವೆ ಶಾಲೆಗಳು ಸಹ ಪ್ರಾರಂಭವಾಗಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ, ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಆರೋಗ್ಯ ಇಲಾಖೆಯ ಗೈಡ್ಲೈನ್ಸ್
- ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
- ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
- ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
- ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
- ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.