ಬೆಂಗಳೂರು: ಮತ್ತೊಮ್ಮೆ ಕೊರೊನಾ ಜಗತ್ತಿನಲ್ಲಿ ತನ್ನ ಹೆಜ್ಜೆ ಇಡಲು ಪ್ರಾರಂಭಿಸಿದೆ. ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಆರೋಗ್ಯ ಸಚಿವಾಲಯ ಮತ್ತು ವೈದ್ಯಕೀಯ ಸಿಬ್ಬಂದಿ ಇಬ್ಬರೂ ಜಾಗರೂಕರಾಗಿದ್ದಾರೆ. ಇದರ ನಡುವೆ ಬೆಂಗಳೂರಿನಲ್ಲಿ ಮೂವರು ಮಕ್ಕಳು ಸೇರಿದಂತೆ 9 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೊಂಕು ತಗುಲಿದ್ದು,
9 ತಿಂಗಳ ಮಗುವಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದೆ. ಇಂದು ಕೂಡಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ರ್ಯಾಂಡಮ್ ಟೆಸ್ಟನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಕೆಮ್ಮು ಮತ್ತು ಜ್ವರ ಹೊಂದಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಚರ್ಚಿಸಲಾಗುತ್ತಿದೆ. ಗರ್ಭಿಣಿಯರಿಗೆ ಮೊದಲು ಕೋವಿಡ್ ಪರೀಕ್ಷೆ ಮಾಡಲು ಚರ್ಚಿಸಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ.