ಬೆಳಗಾವಿ:-ತಮ್ಮ ಮೇಲೆ ಭ್ರಷ್ಟಾಚಾರ ಆರೋಪ ಮಾಡಿರುವ ಸಚಿವ ಬೈರತಿ ಸುರೇಶ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲ್ ಹಾಕಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಬೈರತಿ ಸುರೇಶ್ ಮುಡಾದ ಸಾವಿರಾರು ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆಗಳನ್ನು ಆದಷ್ಟು ಬೇಗ ಬಿಡುಗಡೆಗೊಳಿಸಿ ಎಂದರು.
ಮುಡಾದ ಬಗ್ಗೆ ನಾನು ಧ್ವನಿ ಎತ್ತಿದೆ, ಧ್ವನಿ ಎತ್ತಿದ ತಕ್ಷಣ ನನ್ನ ಬಗ್ಗೆ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸರ್ಕಾರದ ಹಲರು ಆರೋಪ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡೋದು ಇಲ್ಲ. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಪೊನ್ನಣ್ಣನಿಗೆ ನೇಮಕ ಮಾಡಲಿದೆ. ಪೊನ್ನಣ್ಣನಿಗೆ ವಿದ್ಯುತ್ ಇಲಾಖೆಗೆ ಏನು ಸಂಬಂಧವಿದೆ? ಎಂದು ಪ್ರಶ್ನಿಸಿದರು.
ಫೆಕ್ ಫೈಲ್ ಕ್ರಿಯೆಟ್ ಮಾಡಲು ಪೊನ್ನಣ್ಣನಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಪೊನ್ನಣ್ಣ ಇರುವುದು ಸಿಎಂ ಕಾನೂನು ಸಲಹೆಗಾರನಾಗಿ ಅಷ್ಟೇ. ಅದರಲ್ಲಿ ಒಂದು ಭ್ರಷ್ಟಾಚಾರ ಮಾಡಲು ಹೊರಟಿದ್ದೀರಿ. ನಿಮ್ಮ ಬಳಿ ಇರುವ ದಾಖಲೆ ತಕ್ಷಣ ಹೊರಗೆ ಹಾಕಬೇಕು. ನಿಮ್ಮಗೆ ಈಗ ಸಂಕಷ್ಟ ಶುರುವಾಗಿದೆ.
ಮೈಸೂರಿ ನಿಂದ ಫೈಲ್ ತಂದಿದ್ದು ಸತ್ಯ, ಸುಟ್ಟು ಹಾಕಿದ್ದು ಸತ್ಯ. ಮುಡಾ ಬಗ್ಗೆ ತನಿಖೆ ಆರಂಭವಾಗಿದೆ. ತನಿಖೆಗೆ ಕೇಂದ್ರ ಸಂಸ್ಥೆಗಳು ಒಳಹೊಕ್ಕಿವೆ. ಈ ಭಯದಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.