ಲಕ್ಷ್ಮಿ ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ: ಅರವಿಂದ ಬೆಲ್ಲದ್‌

0
Spread the love

ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಪಿಎಗಳನ್ನು ಬಳಸಿ ಮಾಡುತ್ತಿರುವ ಅನ್ಯಾಯ ನೋಡಲಾಗದೇ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಜನ ಹೆಚ್ಚಿನ ಲೀಡ್‌ ನೀಡಿದ್ದರು.

Advertisement

ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಯಾವುದೇ ಬಂಧನ ಆಗಿಲ್ಲ. ತಹಶೀಲ್ದಾರ್‌ ಕಚೇರಿ ಸಿಸಿಟಿವಿಯನ್ನು ವಶಕ್ಕೆ ಪಡೆದುಕೊಂಡಿಲ್ಲ‌. ಸಾಕ್ಷಿ ನಾಶದ ಅನುಮಾನ ವ್ಯಕ್ತವಾಗಿದೆ ಎಂದು ದೂರಿದರು.

ಸಾಕ್ಷಿ ನಾಶ ಮಾಡುವ ಬಗ್ಗೆ ಜನರಿಗೆ ಸಂಶಯವಿದೆ. ಪೊಲೀಸ್ ಇಲಾಖೆ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಸಿಎಂ‌ ಹಾಗೂ ಸಚಿವರ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಮಣಿದಿದ್ದಾರೆ‌. ಪಿಎ ಮಾಡಿರುವ ಕೆಲಸಕ್ಕೆ ಸಚಿವರೇ ಹೊಣೆ ಹೊರಬೇಕು.ಪೊಲೀಸ್‌ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐಗೆ ಪ್ರಕರಣದ ತನಿಖೆ ವಹಿಸಬೇಕು ಎಂದು ಬೆಲ್ಲದ್‌ ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here