ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್ ಆದ ತನಿಖಾಧಿಕಾರಿಯಾಗಿದ್ದು, ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು.
Advertisement
ಸರ್ಕಾರ ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧೀಸಿದ್ದರು. ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ವೇಳೆ ಎ.ಡಿ ನಾಗರಾಜ್ ಆರೋಪಿಗಳಿಂದ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.