ವಿಜಯಸಾಕ್ಷಿ ಸುದ್ದಿ, ಗದಗ: ನಗರದ ದಿ. ಗದಗ ಕೋ-ಆಪ್ ಕಾಟನ್ ಸೇಲ್ ಸೋಸಾಯಿಟಿ ಆವರಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ (ಸಿಸಿಐ) ಹುಬ್ಬಳ್ಳಿ ಶಾಖೆಯ ವತಿಯಿಂದ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರಕ್ಕೆ ಚಾಲನೆ ದೊರೆಯಿತು.
ಸಂಘದ ಅಧ್ಯಕ್ಷ ಆರ್.ಎಂ. ಮೂಲಿಮನಿ ಖರೀದಿ ಕೇಂದ್ರವನ್ನು ಉದ್ಘಾಟಿಸಿದರು.
ನಿರ್ದೇಶಕರಾದ ಎಂ.ಆರ್. ಪಾಟೀಲ, ಕೆ.ಎಚ್. ಪಾಟೀಲ, ಸರ್ವ ಸದಸ್ಯರು, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಯಾಳಗಿಶೆಟ್ಟರ, ಸಿಬ್ಬಂದಿವರ್ಗ ಹಾಗೂ ಸಿಸಿಐ ಅಧಿಕಾರಿ ಜಿ. ರಮೇಶ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.



