ಕೆಮ್ಮು ಸಿರಪ್ ದುರಂತ; ನಮ್ಮ ರಾಜ್ಯದಲ್ಲಿ ಇದು ಸರಬರಾಜು ಆಗಿಲ್ಲ: ದಿನೇಶ್ ಗುಂಡೂರಾವ್

0
Spread the love

ಬೆಂಗಳೂರು:- ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement

ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದರು.

ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಇಂದು ಈ ಬಗ್ಗೆ ಒಂದು ಮಾರ್ಗಸೂಚಿ ಕೂಡ ಬಿಡುಗಡೆ ಮಾಡುತ್ತೇವೆ. ಈ ಹಿಂದೆ ಆರೋಗ್ಯ ಸುರಕ್ಷತೆ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ. ಮಿನರಲ್ ವಾಟರ್ ತಯಾರಿಗೆ ಸಂಬಂಧ ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕರ್ನಾಟಕದಲ್ಲೂ ಎರಡು ಸಿರಪ್ ಪತ್ತೆ ಪ್ರಕರಣ ಕುರಿತು ಮಾತನಾಡಿ, ನಮ್ಮ ಇಲಾಖೆಯಿಂದ ಇಂದು ಮಾರ್ಗಸೂಚಿ ಬಿಡುಗಡೆ ಮಾಡುತ್ತಾರೆ. ಯಾವ ರೀತಿ ಎಚ್ಚರಿಕೆ ವಹಿಸಬೇಕು ಎಂದು ತಿಳಿಸುತ್ತಾರೆ. ಇದೇ ತರಹ ಬೇರೆ ಕಂಪನಿಗಳು ಕಾಫ್ ಸಿರಪ್ ತಯಾರಿಕೆ ಮಾಡಿದರೆ ಅದರ ಮಾದರಿ ಸಂಗ್ರಹಣೆ ಮಾಡಿ ತಪಾಸಣೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ. ಒಂದೆರಡು ದಿನದಲ್ಲಿ ಅದರ ರಿಪೋರ್ಟ್ ಬರುತ್ತದೆ, ಎಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.


Spread the love

LEAVE A REPLY

Please enter your comment!
Please enter your name here