ಕಲಬುರಗಿ: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪತ್ರ ಬರೆಯೋ ಬದಲು ಅವರೇ ಅಳವಡಿಸಬಹುದಿತ್ತಲ್ವ, ಅವರೇ ಸಿಎಂ ಆಗಿದ್ದಾಗ ಈ ಕೆಲಸ ಮಾಡಬಹುದಿತ್ತಲ್ವ? ಎಂದು ಪ್ರಶ್ನಿಸಿದ್ದಾರೆ.
ಭಗವದ್ಗೀತೆಯೇನು ಹೊಸದಲ್ಲ.. ಕುಮಾರಸ್ವಾಮಿ ಅವರು ಸಹ ರಾಜಕಾರಣಕ್ಕೆ ಹೊಸಬರಲ್ಲ, ಅವರೇ ಪತ್ರಿಕೆಯೊಂದರಲ್ಲಿ ದೊಡ್ಡ ಎಡಿಟೋರಿಯಲ್ ಬರೆದಿದ್ರು ಎಂದು ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದು,
ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ಆಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.



