ದೀಪಾವಳಿ ಹಬ್ಬಕ್ಕೆ ಕೌಂಟ್ ಡೌನ್: ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದ CM ಸಿದ್ದರಾಮಯ್ಯ!

0
Spread the love

ಬೆಂಗಳೂರು:- ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅವಘಡ ಸಂಭವಿಸದಂತೆ ಸಿಎಂ ಸಿದ್ದರಾಮಯ್ಯ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Advertisement

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್​ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು.

ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಸೂಚನೆ ನೀಡಿದರು.

ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಈ ಕುರಿತು ಡಿಸಿಗಳು, ಎಸ್​ಪಿಗಳಿಗೆ ಸೂಚನೆ ನೀಡಿದ್ದೇನೆ.

ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ‌ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


Spread the love

LEAVE A REPLY

Please enter your comment!
Please enter your name here