ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ: ಅರಮನೆಯಲ್ಲಿ ಭರದ ಸಿದ್ಧತೆ!

0
Spread the love

ಮೈಸೂರು:-ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. ನಾಡಹಬ್ಬ ದಸರಾ ಸಡಗರ ಸದ್ಯ ಕೊನೆಘಟ್ಟಕ್ಕೆ ತಲುಪಿದೆ. ದಶ ದಿನದ ಕ್ಷಣಕ್ಕೆ ಸಾಕ್ಷಿಯಾಗಲು ಲಕ್ಷಗಟ್ಟಲೆ ಪ್ರವಾಸಿಗರು ಮೈಸೂರಿನತ್ತ ಹೆಜ್ಜೆ ಹಾಕ್ತಿದ್ದಾರೆ. 750 ಕೆ.ಜಿ.ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗೋ ತಾಯಿ ಚಾಮುಂಡಿ ನಾಡಿನ ಜನಕ್ಕೆ ದರ್ಶನ ತೋರಲಿದ್ದಾಳೆ.

Advertisement

ಕ್ಯಾಪ್ಟನ್ ಅಭಿಮನ್ಯು ಐದನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲು ರೆಡಿಯಾಗಿದ್ದಾನೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂಬಾವಿಲಾಸ ಅರಮನೆಯಲ್ಲಿ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಂಬೂಸವಾರಿ ಉದ್ಘಾಟನೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಕೊಡಗು ಸಂಸದ ಹಾಗೂ ರಾಜವಂಶಸ್ಥರಾದ ಯದುವೀರ್ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಾಥ್ ನೀಡಲಿದ್ದಾರೆ.

ಚಿನ್ನದ ಅಂಬಾರಿ ಹೊತ್ತು ಸಾಗೋ ಕ್ಯಾಪ್ಟನ್ ಅಭಿಮನ್ಯುವಿಗೆ ಲಕ್ಷ್ಮೀ, ಹಿರಣ್ಯ ಕುಮ್ಕಿ ಆನೆಗಳಾಗಿ ಸಾಥ್ ನೀಡಿದ್ರೆ, ಧನಂಜಯ ನಿಶಾನೆ ಆನೆಯಾಗಲಿದ್ದಾನೆ. ಗೋಪಿ ನೌಪತ್ ಆನೆಯಾಗಲಿದ್ದು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಲಿವೆ.


Spread the love

LEAVE A REPLY

Please enter your comment!
Please enter your name here