ಬೆಂಗಳೂರು:- ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಈ ನಡುವೆಯೇ ಬೆಂಗಳೂರಿಗೆ ಉಗ್ರರ ಕರಿನೆರಳು ಬಿದ್ದಿದೆ. ಹೀಗಾಗಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ.
ಆಗಸ್ಟ್ 15ರಂದು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಧ್ವಜಾರೋಹಣ ಮಾಡಲಿದ್ದಾರೆ. ಆದ್ರೆ, ಬೆಂಗಳೂರು ನಗರವನ್ನು ಉಗ್ರರು ಟಾರ್ಗೆಟ್ ಮಾಡಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯೊಂದು ಬಂದಿದೆ.
ಹೀಗಾಗಿ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದು, ಹೋಟೆಲ್ಗಳಲ್ಲಿ ತಂಗುವ ವಿದೇಶಿಗರು, ಸಂಶಯಾಸ್ಪದ ವ್ಯಕ್ತಿಗಳು ಹಾಗೂ ಅಪರಿಚಿತ ವ್ಯಕ್ತಿಗಳು ಕಂಡಲ್ಲಿ ಸ್ಥಳೀಯ ಠಾಣೆಗೆ ಮಾಹಿತಿ ನೀಡುವಂತೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಪತ್ರ ಬರೆದಿದ್ದಾರೆ.
ಬೆಂಗಳೂರು ನಗರವನ್ನು ಉಗ್ರರು ಟಾರ್ಗೆಟ್ ಮಾಡಿಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ವಸತಿ ಸೌಕರ್ಯವುಳ್ಳ ಹೋಟೆಲ್ಗಳಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಹೋಟೆಲ್ಗಳಲ್ಲಿ ತಂಗುವ ವಿದೇಶಿಗರು, ಸಂಶಯಾಸ್ಪದ ವ್ಯಕ್ತಿಗಳು ಹಾಗೂ ಅಪರಿಚಿತ ವ್ಯಕ್ತಿಗಳು ಕಂಡಲ್ಲಿ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕು. ಅಲ್ಲದೇ ಭದ್ರತೆ ದೃಷ್ಟಿಯಿಂದ ಪೊಲೀಸರಿಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸುವಂತೆ ಹೋಟೆಲ್ ಸಂಘದ ಅಧ್ಯಕ್ಷರು, ಸದಸ್ಯರು, ಹೋಟೆಲ್ ಮಾಲೀಕರು ಹಾಗೂ ಹೋಟೆಲ್ ಮ್ಯಾನೇಜರ್ ಸೇರಿ ಇತರೆ ನೌಕರರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.