IPLಗೆ ದಿನಗಣನೆ ಆರಂಭ: ಅಭ್ಯಾಸ ಆರಂಭಿಸಿದ ಮಹೇಂದ್ರ ಸಿಂಗ್ ಧೋನಿ!

0
Spread the love

ಐಪಿಎಲ್ 2025ರ ಆರಂಭಕ್ಕೆ ಇನ್ನೂ ಎರಡು ತಿಂಗಳಿದ್ದು, ಅದಕ್ಕೂ ಮುನ್ನವೇ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಭ್ಯಾಸ ಆರಂಭಿಸಿದ್ದಾರೆ.

Advertisement

ಮಹೇಂದ್ರ ಸಿಂಗ್ ಧೋನಿ ಮುಂಬರುವ ಐಪಿಎಲ್ ಸೀಸನ್​ಗಾಗಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರೊಂದಿಗೆ ಐಪಿಎಲ್ 2025 ರಲ್ಲೂ ಧೋನಿ ಕಣಕ್ಕಿಳಿಯುವುದು ಖಚಿತವಾದಂತಾಗಿದೆ.

ಐಪಿಎಲ್ 2025 ಮಹೇಂದ್ರ ಸಿಂಗ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಎನ್ನಲಾಗುತ್ತಿದೆ. 43 ವರ್ಷದ ಎಂಎಸ್​ಡಿ ಕಳೆದ ಸೀಸನ್​ನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಹಂತಕ್ಕೇರಲು ವಿಫಲವಾದ ಕಾರಣ ಧೋನಿ ನಿವೃತ್ತಿ ಘೋಷಿಸಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು.

ಇದೀಗ ಮತ್ತೊಮ್ಮೆ ಧೋನಿಯ ನಿವೃತ್ತಿ ಸುದ್ದಿಗಳು ಮುನ್ನಲೆಗೆ ಬಂದಿದೆ. ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 6ನೇ ಟ್ರೋಫಿ ಗೆದ್ದುಕೊಡುವ ಮೂಲಕ ಧೋನಿ ನಿವೃತ್ತರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here