ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ: ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆ

0
Spread the love

ದಕ್ಷಿಣ ಭಾರತದ ಗಂಗೆ ಅಂತಲೇ‌ ಪೂಜಿಸಲ್ಪಡುವ ಕನ್ನಡ ನಾಡಿನ ಜೀವ ನದಿ ಕಾವೇರಿ ತೀರ್ಥೋದ್ಭವಕ್ಕೆ ಕೊಡಗಿನ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯದಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲದಲ್ಲಿ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.

Advertisement

ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ನಾಳೆ ಬೆಳಿಗ್ಗೆ 7:40 ಗಂಟೆಗೆ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಈ ಪವಿತ್ರ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಕೈಗೊಂಡಿದೆ.  ಈಗಾಗಲೇ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ  ಹೂವಿನ ಅಲಂಕಾರ ನಡೆಯುತ್ತಿದೆ.

ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ವಿದ್ಯುತ್ ದೀಪ ಅಲಂಕಾರ, ಧ್ವನಿವರ್ಧಕ ಜೋಡಣೆ, ಪಾರ್ಕಿಂಗ್ ವ್ಯವಸ್ಥೆ, ಸಿದ್ಧತಾ ಕಾರ್ಯ ನಡೆದಿದೆ. ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಹೆಚ್ಚು ಜನರು ಬರುತ್ತಿರುವ ಕಾರಣ ನೂಕು‌ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಹಾಗೂ ಸಿಸಿ ಕ್ಯಾಮರಾಗಳ ವ್ಯವಸ್ಥೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here