HomeKarnataka Newsಹೊಸವರ್ಷಕ್ಕೆ ಕೌಂಟ್ ಡೌನ್: ಮೈಸೂರಿನಲ್ಲಿ ಗೈಡ್ ಲೈನ್ಸ್ ಜಾರಿ, ಮಹಿಳೆಯರ ಸುರಕ್ಷತೆಗೆ ಆದ್ಯತೆ!

ಹೊಸವರ್ಷಕ್ಕೆ ಕೌಂಟ್ ಡೌನ್: ಮೈಸೂರಿನಲ್ಲಿ ಗೈಡ್ ಲೈನ್ಸ್ ಜಾರಿ, ಮಹಿಳೆಯರ ಸುರಕ್ಷತೆಗೆ ಆದ್ಯತೆ!

For Dai;y Updates Join Our whatsapp Group

Spread the love

ಮೈಸೂರು:- ಹೊಸವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ನ್ಯೂ ಇಯರ್ ಬರಮಾಡಿಕೊಳ್ಳಲು ಜನ ಕಾತುರರಾಗಿದ್ದಾರೆ. ಅಲ್ಲದೇ ಹೊಸವರ್ಷ 2025 ನ್ನು ಬರಮಾಡಿಕೊಳ್ಳಲು ರಾಜ್ಯದ ಜನರು ಭರದ ಸಿದ್ದತೆಯಲ್ಲಿ ತೊಡಗಿದ್ದಾರೆ.

ಈ ಮಧ್ಯೆ ಮೈಸೂರಿನಲ್ಲಿಯೂ ಹೊಸ ವರ್ಷಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಹೊಸ ವರ್ಷಾಚರಣೆಗೆ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರಿಂದ ಗೈಡ್ ಲೈನ್ಸ್​ ಜಾರಿ ಮಾಡಲಾಗಿದೆ.

ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಡಿ. 31ರ ರಾತ್ರಿ 7 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್, ಲಲಿತಮಹಲ್ ಗೇಟ್ ಮೂಲಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ಡಿ. 31ರ ರಾತ್ರಿ 8 ಗಂಟೆ ನಂತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಗೈಡ್ ಲೈನ್ಸ್​​ ಹೀಗಿದೆ:-

* ಸಾರ್ವಜನಿಕರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ಪೊಲೀಸ್ ನಿರೀಕ್ಷಕರುಗಳು ನೇತೃತ್ವದಲ್ಲಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಗಳು ಕಾರ್ಯನಿರತವಾಗಿದ್ದು ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

* ಮಹಿಳೆಯರ ರಕ್ಷಣೆಯ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ಪಡೆಗಳು ಗಸ್ತಿನಲ್ಲಿರುತ್ತದೆ.

* ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆ ನಡೆಸಲಾಗುವುದು.

* ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಣಾವಲು ನಿರ್ವಹಿಸಲಾಗುತ್ತದೆ.

* ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದು ಹಾಗೂ ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಒಳಗೊಂಡ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದೆ. ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಚಾಲನೆಯಲ್ಲಿರುತ್ತದೆ. ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು.

* ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮತ್ತು ಕಿಡಿಗೇಡಿಗಳ ಬಗ್ಗೆ ನಿಗಾವಹಿಸಲು ಚೆಕ್ ಪೋಸ್ಟ್ಗಳನ್ನು ತೆರೆಯುವದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 112 ವಾಹನ, ಹೈವೇ ಪೆಟ್ರೋಲ್ ವಾಹನಗಳನ್ನು ನಿಯೋಜಿಸಲಾಗಿದೆ.

* ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗದಂತೆ ಕ್ರಮಕ್ಕೆ ಸೂಚಿಸಲಾಗಿದ್ದು, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್ ಮೆಂಟ್, ಅಪಾರ್ಟ್ ಮೆಂಟ್ ಅಸೋಸಿಯೇಷನ್, ಮಾಲ್ ಮತ್ತು ಸಂಘ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ಸೂಚನೆ ಪಾಲಿಸುವಂತೆ ತಿಳಿಸಲಾಗಿದೆ.

* ಡಿ. 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹೋಂ ಸ್ಟೇ, ಸಂಘಸಂಸ್ಥೆಗಳು ಪೊಲೀಸ್ ಆಯುಕ್ತರ ಕಛೇರಿಯಿಂದ ಅನುಮತಿ ಪಡೆದು ಮಧ್ಯರಾತ್ರಿ 1-00 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು.

* ಸೋಷಿಯಲ್​ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಅಪಪ್ರಚಾರ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸದರಿಯವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!