ಬೆಂಗಳೂರು:- ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಅಂದು ರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ನಗರದ ಎಂ.ಜಿ.ರೋಡ್ ಮತ್ತು ಬ್ರಿಗೇಡ್‌ರೋಡ್‌ಗಳಿಂದ ನಗರದ ಪ್ರಮುಖ ಭಾಗಗಳಿಗೆ, ಸಾರ್ವಜನಿಕರ ಅನುಕೂಲಕ್ಕಾಗಿ, ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ರಾತ್ರಿ 11:00 ಗಂಟೆಯಿಂದ ಮಧ್ಯರಾತ್ರಿ 2:00 ಗಂಟೆಯವರೆಗೆ ಹೆಚ್ಚುವರಿ ಬಸ್‌ಗಳು ಓಡಿಸಲಿದ್ದು, ಪ್ರಯಾಣಿಕರ ಬೇಡಿಕೆಯನ್ನು ಪೂರೈಸುವಂತೆ ಹೆಚ್ಚಿನ ವಾಹನ ವ್ಯವಸ್ಥೆ ಮಾಡಲಾಗಿದೆ.
ಎಲೆಕ್ಟ್ರಾನಿಕ್ಸ್ ಸಿಟಿ ಪೂರ್ವ, ಜಿಗಣಿ, ಸರ್ಜಾಪುರ, ಕೆಂಗೇರಿ ಕೆಎಚ್‌ಬಿ ಕ್ವಾಟರ್ಸ್, ಜನಪ್ರಿಯ ಟೌನ್‌ಶಿಪ್, ನೆಲಮಂಗಲ, ಯಲಹಂಕ, ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮನಗರ ಸೇರಿದಂತೆ ಹಲವೆಡೆ ಬಸ್‌ಗಳು ಸಂಚರಿಸಲಿವೆ.



