ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಗಣನೆ: ಯಾವಾಗ ಶುರು? ಈ ಬಾರಿ ಎಷ್ಟು ದಿನ ನಡೆಯಲಿದೆ?

0
Spread the love

ಬೆಂಗಳೂರು:- ನವೆಂಬರ್ 17ರಿಂದ 21ರವರೆಗೆ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆಕಾಯಿ ಪರಿಷೆ ಶುರುವಾಗಲಿದೆ. ಹೀಗಾಗಿ ಪರಿಷೆಗೆ ಸಿದ್ಧತೆ ಭರದಿಂದ ಶುರುವಾಗಿದೆ.

Advertisement

ಬಸವಣ್ಣ ಹಾಗೂ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಈ ವರ್ಷ ವಿಜೃಂಭಣೆಯಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ಆಚರಿಸಲು ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಕಡೇ ಕಾರ್ತಿಕ ಮಾಸದ ಕೊನೆಯ ಸೋಮವಾರ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಬೆಳಗ್ಗೆ 10ಕ್ಕೆ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗುತ್ತಿದ್ದು, ಪರಿಷೆಗೆ 5 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ.

ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆಯುವ ಕಡಲೆಕಾಯಿ ಪರಿಷೆ ಐತಿಹಾಸಿಕ ಹಿನ್ನಲೆ ಹೊಂದಿದೆ. ಪರಿಷೆಗೆ ಲಕ್ಷಾಂತರ ಜನ ಸೇರುತ್ತಾರೆ. ಬಸವನಗುಡಿ ಕಡಲೆಕಾಯಿ ಪರಿಷೆ ಈ ಹಿಂದೆ ಮೂರು ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈ ವರ್ಷ 5 ದಿನಗಳಿಗೆ ಅವಕಾಶ ನೀಡಲಾಗಿದೆ.

ಒಟ್ಟಿನಲ್ಲಿ, ಪರಿಷೆಗೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಭರ್ಜರಿಯಾಗಿ ಕಡಲೆಕಾಯಿ ಪರಿಷೆ ಸಂಭ್ರಮಿಸಲು ನಗರವಾಸಿಗಳು ಕಾತುರರಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here