ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಹೆಬ್ಬಾಳ ಫ್ಲೈಓವರ್ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ಸಿದ್ಧತೆ ಕಾರ್ಯಗಳು ಭರದಿಂದ ಸಾಗುತ್ತಿದೆ.
Advertisement
ಎಸ್, ಸಿಎಂ ಸಿದ್ದರಾಮಯ್ಯ ಅವರು, ಹೆಬ್ಬಾಳ ವಿಸ್ತರಿತ ಫ್ಲೈಓವರ್ ಅನ್ನು ನಾಳೆ ಉದ್ಘಾಟಿಸಲಿದ್ದಾರೆ. 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ಸರ್ಕಲ್‌ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ಫೈಓವರ್ ಉದ್ಘಾಟನೆ ಆಗಲಿದ್ದು, ಇದೀಗ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಿಬ್ಬಂದಿ ಫ್ಲೈಓವರ್ ರ‍್ಯಾಂಪ್‌ಗೆ ಹೂವುಗಳ ಸರಮಾಲೆ ಹಾಕಿ ಸಿದ್ಧತೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.