ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಆರೋಪ: ಹೆಚ್ ಡಿಕೆ ವಿರುದ್ಧ ದೂರು ನೀಡಿದ ಉದ್ಯಮಿ ವಿರುದ್ಧ ಪ್ರತಿದೂರು!

0
Spread the love

ಬೆಂಗಳೂರು:- 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ ವಿರುದ್ಧ ಇಂದು ಉದ್ಯಮಿ ಓರ್ವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Advertisement

ಇದೀಗ ದೂರು ನೀಡಿದ್ದ ಉದ್ಯಮಿ ವಿರುದ್ಧವೇ ಪ್ರತಿದೂರು ದಾಖಲಾಗಿದೆ. ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಉದ್ಯಮಿ ವಿಜಯ್ ಟಾಟಾ ವಿರುದ್ಧ ಇದೀಗ ವಿಧಾನಪರಿಷತ್ ಜೆಡಿಎಸ್​ ಮಾಜಿ​ ಸದಸ್ಯ ರಮೇಶ್​ಗೌಡ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಗೌಡರ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ.

ನೂರು ಕೋಟಿ ರೂ. ಹಣ ಕೇಳಿದ್ದ, ಇಲ್ಲ ಅಂದಿದ್ದಕ್ಕೆ, ಆ.24ರಂದು ಮನೆಗೆ ಊಟಕ್ಕೆ ಕರೆದಾಗ ಬೆದರಿಕೆ ಹಾಕಿದ್ದಾರೆ. ನಾನು ಈಗಾಗಲೇ ಲಾಸ್​ನಲ್ಲಿದ್ದೇನೆ, ನನಗೆ ಹಣ ಬೇಕು. ನೀವು ನೂರು ಕೋಟಿ ರೂ. ಕೊಡಿ, ಇಲ್ಲವಾದರೆ ನಿಮ್ಮನ್ನ ಮತ್ತು ಹೆಚ್​ಡಿ ಕುಮಾರಸ್ವಾಮಿಯನ್ನ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ದೂರು ನೀಡಿರುವ ವಿಜಯ್ ಟಾಟಾ, ಹೊರಗಿನವರಲ್ಲ. 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಹೆಚ್​ಡಿ ಕುಮಾರಸ್ವಾಮಿ ಮತ್ತು ಮಾಜಿ ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದಾರೆ. ದೂರಿನ ಅನ್ವಯ ಇಬ್ಬರ ವಿರುದ್ಧವೂ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here