ಬೆಂಗಳೂರು:– ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಬೇಕೆಂದು ಕೋರಿ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ವಜಾ ಮಾಡಿದೆ.
ನಟ ದರ್ಶನ್ ಪರ ವಕೀಲರು ಕೂಡ ದರ್ಶನ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ವಿರೋಧಿಸಿದ್ದರು. ಅದರಂತೆ ಇಂದು ತೀರ್ಪು ಪ್ರಕಟಿಸಿರುವ ಕೋರ್ಟ್, ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜೈಲು ಮ್ಯಾನ್ಯುಯಲ್ ಪ್ರಕಾರ ಸೌಲಭ್ಯ ನೀಡಲು ಆದೇಶ ನೀಡಿದೆ.
ಹೀಗಾಗಿ ಈಗ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಬೇಸಿಗೆಯಲ್ಲಿ ಬಳ್ಳಾರಿಯ ಸುಡು ಬಿಸಿಲಿನ ವಾತಾವರಣದಿಂದ ದರ್ಶನ್ ಅಂಡ್ ಗ್ಯಾಂಗ್ ಎಸ್ಕೇಪ್ ಆಗಿದೆ. ಆದರೇ, ನಟ ದರ್ಶನ್ ಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಜೈಲು ಮ್ಯಾನುಯಲ್ ಪ್ರಕಾರ ಏನೆಲ್ಲಾ ಸೌಲಭ್ಯ ಕೊಡಬೇಕು ಅದನ್ನು ಕೊಡಿ ಎಂದು ಕೋರ್ಟ್ ಆದೇಶ ನೀಡಿದೆ. ಮತ್ತೆ ಏನಾದ್ರು ಜೈಲಿನಲ್ಲಿ ರಾಜಾತಿಥ್ಯ ಕಂಡು ಬಂದ್ರೆ ಶಿಫ್ಟ್ ಮಾಡುವ ಅಧಿಕಾರ ಜೈಲಿನ ಐಜಿ ಗೆ ಇದೆ. ಜೈಲಿನ ಮ್ಯಾನ್ಯುಯಲ್ ಪ್ರಕಾರ ವಾಕಿಂಗ್ ಮಾಡಲು ಅವಕಾಶ ಕೊಡಿ ಎಂದು ಕೋರ್ಟ್ ಹೇಳಿದೆ. 64ನೇ ಸಿಸಿಹೆಚ್ ಕೋರ್ಟ್ ಈ ಆದೇಶ ನೀಡಿದೆ.