ಮಂಗಳೂರು: ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್ ನೀಡಿದೆ.
ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ಕರಾವಳಿ ಜಿಲ್ಲಾದ್ಯಂತ ಭಾರೀ ಸದ್ದು ಮಾಡಿತ್ತಲ್ಲದೇ ಜನರು ಸ್ವಯಂ ಪ್ರೇರಿತವಾಗಿ ಬೀದಿಗಳಿದು ಪ್ರತಿಭಟನೆಯನ್ನು ಮಾಡಿದ್ದರು.



