ಕೋವಿಡ್ ಹಗರಣ: ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ – ಡಾ.ಕೆ. ಸುಧಾಕರ್

0
Spread the love

ಬೆಂಗಳೂರು: ಕೋವಿಡ್ ಹಗರಣಗಳ ಸಂಬಂಧ ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿ ನೀಡಿದ ವಿಚಾರವಾಗಿ ಚಿಕ್ಕಬಳ್ಳಾಪುರ ಸಂಸದ ಹಾಗೂ ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿದ್ದಾರೆ.

Advertisement

ನಾನು ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಚಿವನಾಗಿದ್ದೆ. ನಾನು ಆವಾಗ ಅತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

ಆ ಸಮಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಯಾವುದೇ ತೀರ್ಮಾನ ಇದ್ದರೂ ಟಾಸ್ಕ್ ಮೂಲಕ ತೆಗೆದುಕೊಳ್ಳುತ್ತಿದ್ದೆವು.

ಹಿರಿಯ ಅಧಿಕಾರಿಗಳು, ತಜ್ಞರು ಅದರಲ್ಲಿದ್ದರು. ಆಗ ವೈದ್ಯಕೀಯ ತುರ್ತುಪರಿಸ್ಥಿತಿ ಇತ್ತು. ಈಗ ಇವರು ಇವತ್ತಿನ ದರ ಆಧರಿಸಿ ಲೆಕ್ಕ ಹಾಕಿದ್ದಾರಂತೆ. ವರದಿಯನ್ನು ನಿನ್ನೆ ಸ್ವೀಕಾರ ಮಾಡಿದ್ದಾರೆ. ವರದಿ ಬಗ್ಗೆ ಸರ್ಕಾರದ ಹೇಳಿಕೆ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದು ಗುಡುಗಿದರು.


Spread the love

LEAVE A REPLY

Please enter your comment!
Please enter your name here