HomeKarnataka Newsಕೋವಿಡ್ ಹಗರಣದ ತನಿಖೆ CBI ಹೆಗಲಿಗೆ: ರಾಜ್ಯ ಸರ್ಕಾರ ಆದೇಶ!

ಕೋವಿಡ್ ಹಗರಣದ ತನಿಖೆ CBI ಹೆಗಲಿಗೆ: ರಾಜ್ಯ ಸರ್ಕಾರ ಆದೇಶ!

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. ಹಗರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕೋವಿಡ್ ಹಗರಣ ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಇತ್ಯಾದಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆಯೇ, ಹಿಂದಿನ ಬಿಜೆಪಿ ಸರ್ಕಾರದ ಅವಧಿ ಹಗರಣದ ಬಗ್ಗೆ ತನಿಖೆಗೆ ಕಾಂಗ್ರೆಸ್ ಮುಂದಾಗಿತ್ತು.

ಬಳಿಕ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!