ಬೆಂಗಳೂರು:- ಕೋವಿಡ್ ಸೋಂಕಿಗೆ 63 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ಜರುಗಿದೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
Advertisement
ಕಿಡ್ನಿ ವೈಫಲ್ಯವಾಗಿ ಮೇ 15ರಂದು ಈ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೇ 25ರಂದು ಮೃತಪಟ್ಟಿದ್ದಾರೆ. ಬಳಿಕ ಮೃತಪಟ್ಟ ವ್ಯಕ್ತಿಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಎಂಬ ವರದಿ ಬಂದಿದೆ.
ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು, ಸ್ವ್ಯಾಬ್ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಿದೆ.