ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ: ಇದು ಸರ್ಕಾರದ ಸಂಕ್ರಾಂತಿ ಗಿಫ್ಟ್ ಎಂದ ವಿಪಕ್ಷ ನಾಯಕ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಡಿಗೇಡಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಗೋ ಪೂಜೆ ಬಹಳ ಪವಿತ್ರ. ಸಂಕ್ರಾಂತಿಗೆ ಸಂಭ್ರಮ ಇರುತ್ತದೆ. ಕಾಂಗ್ರೆಸ್ ಸರ್ಕಾರ ಬಂದಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಜಿಹಾದಿ ಮನಸ್ಥಿತಿ ಇದು ಎಂದರು.

ಹಾಲು ಕೊಡುವ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಹಸುವಿನ ಮಾಲೀಕ ಆರ್‌ಎಸ್‌ಎಸ್ ಕಾರ್ಯಕರ್ತ. ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುವಿನ ಮಾಲೀಕರು ಹೋರಾಟ ಮಾಡಿದರು. ಹಸುಗಳನ್ನ ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂಬುದಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಮಾತೆತ್ತಿದರೆ ದೇವಸ್ಥಾನ, ಹೋಮ ಮಾಡುತ್ತಾರೆ. ಇದು ವೋಟ್‌ಗಾಗಿ ಮಾಡುತ್ತಿರುವುದು ಎಂದು ಕಿಡಿಕಾರಿದರು.

ಹಿಂದೂಗಳನ್ನು ಭಯಭೀತರನ್ನಾಗಿ ಮಾಡುವ ಉದ್ದೇಶ ಇದು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಣೆ ಮಾಡುತ್ತೇವೆ. ಸಿಸಿಟಿವಿಗಳನ್ನು ಒಡೆದು ಹಾಕಿದ್ದಾರಂತೆ. ಪಶು ಆಸ್ಪತ್ರೆ ಉಳಿವಿಗಾಗಿ ಹೋರಾಟ ಮಾಡಿದ ಹಸುಗಳ ಮಾಲೀಕರಿಗೆ ಭಯ ಶುರುವಾಗಿದೆ.ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಗೌರವ ಇದೆಯಾ ಇವ್ರಿಗೆ? ಸ್ಥಳೀಯ ಶಾಸಕರು ಬಂದಿಲ್ಲ ಎಂದು ಹರಿಹಾಯ್ದರು.


Spread the love

LEAVE A REPLY

Please enter your comment!
Please enter your name here