ಬೆಂಗಳೂರು:- ನಗರದ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕೇಸ್ ಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
Advertisement
ಬಿಹಾರದ ಚಂಪರಣ್ ಮೂಲದ 30 ವರ್ಷದ ಸೈಯದ್ ನಸ್ರು ಬಂಧಿತ ಆರೋಪಿ. ಆರೋಪಿಯು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಘಟನೆ ಹಿನ್ನೆಲೆ:
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.


