ರಾಮನಗರ: ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಕಾಂಗ್ರೆಸ್‌ಗೆ ಬುಧವಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಚನ್ನಪಟ್ಟಣದಿಂದ ಅವರ ಉಮೇದುವಾರಿಕೆಯನ್ನು ಘೋಷಿಸಿದೆ. ಇಂದು ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ನ ಕಾರ್ಯಕರ್ತರು, ಮುಖಂಡರೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿದ ಯೋಗೇಶ್ವರ್ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಸಿ.ಪಿ ಯೋಗೇಶ್ವರ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ರಾಮಲಿಂಗಾ ರೆಡ್ಡಿ, ಚಲುವರಾಯ ಸ್ವಾಮಿ ಹಾಗೂ ಡಿಕೆ ಸುರೇಶ್, ಹೆಚ್.ಎಂ ರೇವಣ್ಣ ಸೇರಿದಂತೆ ಕಾಂಗ್ರೆಸ್ನ ಇತರೆ ನಾಯಕರು ಹಾಜರಿದ್ದರು. ಜನರು ಕೂಡ ಹೆಚ್ಚಿನ ಮಟ್ಟದಲ್ಲಿ ನಾಮಪತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.



