Virender Sehwag Divorce: 20 ವರ್ಷಗಳ ದಾಂಪತ್ಯದಲ್ಲಿ ಬಿರುಕು: ಶೀಘ್ರದಲ್ಲೇ ವೀರೇಂದ್ರ ಸೆಹ್ವಾಗ್‌ -ಆರತಿ ವಿಚ್ಛೇದನ..!?

0
Spread the love

ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಎಂಬುದು ಭಾರತದಲ್ಲೂ ಸರ್ವೆ ಸಾಮಾನ್ಯವಾಗಿದೆ. ಭಾರತ ತಂಡದ ಸ್ಟಾರ್ ಆಟಗಾರ ಯಜುವೇಂದ್ರ ಚಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ವಿಚ್ಚೇದನ ಕುರಿತ ವಂದತಿಗಳು ವ್ಯಾಪಕವಾಗಿರುವಂತೆಯೇ ಇತ್ತ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

Advertisement

ಹೌದು.. ಟೀಮ್​ ಇಂಡಿಯಾ ಸ್ಪಿನ್ನರ್​​ ಯುಜುವೇಂದ್ರ ಚಹಲ್​ ಮತ್ತು ಧನಶ್ರೀ ವರ್ಮಾ ದಾಂಪತ್ಯ ಜೀವನದಲ್ಲಿ ಬಿರುಕುಂಟಾಗಿದೆ ಎಂಬ ಸುದ್ದಿಯೇ ಇನ್ನೂ ಮಾಸಿಲ್ಲ. ಅದಾಗಲೇ ಮತ್ತೋರ್ವ ಕ್ರಿಕೆಟಿಗ ವಿಚ್ಚೇದನ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ.

20 ವರ್ಷಗಳ ಸುಧೀರ್ಘ ದಾಂಪತ್ಯದ ಬಳಿಕ ವೀರೇಂದ್ರ ಸೇಹ್ವಾಗ್ ಅವರು ತಮ್ಮ ಪತ್ನಿ ಆರತಿ ಅಹ್ಲಾವತ್‌ಗೆ ವಿಚ್ಛೇದನ ನೀಡುವ ಸಾಧ್ಯತೆ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ. 2004ರಲ್ಲಿ ವಿವಾಹವಾಗಿದ್ದ ಜೋಡಿ ಇನ್ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಈಗಾಗಲೇ ಅನ್‌ಫಾಲೋ ಮಾಡಿಕೊಂಡಿದ್ದಾರೆ. ಇದರೊಂದಿಗೆ ಇವರಿಬ್ಬರ ಸಂಬಂಧದ ಕುರಿತು ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ.

ಇವರ ಕುಟುಂಬದ ಆಪ್ತ ಮೂಲಗಳ ಪ್ರಕಾರ, ಈಗಾಗಲೇ ಹಲವು ತಿಂಗಳುಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದು, ಶೀಘ್ರದಲ್ಲೇ ಇಬ್ಬರು ವಿಚ್ಛೇದನ ಖಚಿತವಾಗಬಹುದು ಎನ್ನಲಾಗಿದೆ. ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದಾಗಿಯೇ ಕ್ರಿಕೆಟ್‌ ವಲಯದಲ್ಲಿ ದೊಡ್ಡ ಹೆಸರು ಮಾಡಿದ್ದ ವೀರೇಂದ್ರ ಸೆಹ್ವಾಗ್‌ ಹಾಗೂ ಆರತಿ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

2007ರಲ್ಲಿ ಹಿರಿಯ ಪುತ್ರ ಆರ್ಯವೀರ್‌ ಜನಿಸಿದ್ದರೆ, 2010ರಲ್ಲಿ 2ನೇ ಪುತ್ರ ವೇದಾಂತ್‌ ಜನಿಸಿದ್ದ. ದೀರ್ಘ ಅವಧಿಯ ಕಾಲ ಜೊತೆಯಾಗಿಯೇ ಸಂಸಾರ ಮಾಡಿದ್ದರೂ ಕೂಡ ಇತ್ತೀಚಿನ ಬೆಳವಣಿಗಳು ಇವರಿಬ್ಬರ ನಡುವಿನ ಅಂತರ ದೊಡ್ಡ ಮಟ್ಟದಲ್ಲಿ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಇತ್ತೀಚಿನ ಬೆಳವಣಿಗೆಗಳು ಹೆಚ್ಚುತ್ತಿರುವ ಅಂತರದ ಸುಳಿವು ನೀಡುತ್ತವೆ. ದೀಪಾವಳಿ ಆಚರಣೆಯ ಸಮಯದಲ್ಲಿ ವೀರೇಂದ್ರ ತಮ್ಮ ಪುತ್ರರು ಮತ್ತು ಅವರ ತಾಯಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಆದರೆ ಆ ಫೋಟೋದಲ್ಲಿ ಆರತಿಯ ಯಾವುದೇ ಉಲ್ಲೇಖ ಅಥವಾ ಚಿತ್ರಗಳು ಇರುವುದನ್ನು ಉಲ್ಲೇಖಿಸಿಲ್ಲ. ಈ ಎಲ್ಲಾ ಬೇಳವಣಿಗೆಯಿಂದ ಈ ಸ್ಟಾರ್ ದಂಪತೊ ವಿಚ್ಛೇದನ ಬಹುತೇಕ ಖಚಿತ ಎನ್ನಲಾಗಿದೆ.

ಎರಡು ವಾರಗಳ ಹಿಂದೆ, ವೀರೇಂದ್ರ ಪಾಲಕ್ಕಾಡ್‌ನಲ್ಲಿರುವ ವಿಶ್ವ ನಾಗಯಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿದರು ಮತ್ತು ಪ್ರವಾಸದ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡರು. ಆದಾಗ್ಯೂ, ಪೋಸ್ಟ್‌ನಲ್ಲಿ ಆರತಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇದು ಪತಿ-ಪತ್ನಿಯ ನಡುವೆ ಎಲ್ಲವೂ ಸರಿ ಇಲ್ಲ ಎಂದು ಹೇಳಲಾಗಿದೆ. ಆದ್ರೆ, ಈ ಕುರಿತು ಮಾಜಿ ಸ್ಟಾರ್ ಕ್ರಿಕೆಟರ್ ಸೆಹ್ವಾಗ್ ಅಧಿಕೃತವಾಗಿ ಸ್ಪಷ್ಟಪಡಿಸಿಲ್ಲ.


Spread the love

LEAVE A REPLY

Please enter your comment!
Please enter your name here